ಅನಿವಾಸಿ ಭಾರತೀಯ ಸಮಿತಿ

ಕರ್ನಾಟಕ ಸರ್ಕಾರ

ಪರಿಚಯ

Home

ಮಾನ್ಯ ಮುಖ್ಯಮಂತ್ರಿಯವರು, 2008-09ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಅನಿವಾಸಿ ಕನ್ನಡಿಗರ ವಿಶೇಷ ಘಟಕ (ಎನ್.ಆರ್.ಕೆ ಸೆಲ್) ಸ್ಥಾಪನೆ ಮಾಡುವುದು ತಿಳಿಸಿರುತ್ತಾರೆ. ಈ ಘಟಕವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರೀತಿಯಲ್ಲಿ ಘೋಷಿಸಲಾಗಿದೆ. ಇದರ ವ್ಯಾಪ್ತಿಯನ್ನು ವಿಸ್ತಾರಗೊಳಿಸುವ ದೃಷಿಯಿಂದ ಹಾಗೂ ಆಡಳಿತ ನಿರ್ವಹಣೆಯ ದೃಷಿಯಿಂದ “ ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ” ಎಂದು ಸ್ಥಾಪಿಸಲು ನಿರ್ಧರಿಸಿದೆ. ಈ ಸಮಿತಿಯನ್ನು ಮಾನ್ಯ ಮುಖ್ಯ ಮಂತ್ರಿಯವರ ನೇರ ನಿಯಂತ್ರಣಕ್ಕೆ ಒಳಪಡಿಸಬೇಕಾಗಿರುವುದರಿಂದ, ಇದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವುದೆಂದು ತೀರ್ಮಾನಿಸಲಾಗಿದೆ.

 

ಪ್ರಸ್ತುತ, ಕೇಂದ್ರ ಸರ್ಕಾರ ಮತ್ತು ಇತರ ರಾಜ್ಯಗಳಲ್ಲಿ ಅನಿವಾಸಿ ಭಾರತೀಯರಿಗಾಗಿ ಇರುವ ವಿಭಾಗದ ಮಾದರಿಯಲ್ಲಿ ಕರ್ನಾಟಕ ಸರ್ಕಾರವು “ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ”ವನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಈ ಸಮಿತಿಯ ಮೂಲಕ ಈ ಕೆಳಕಂಡ ಕ್ಷೇತ್ರಗಳಲ್ಲಿ ಅನಿವಾಸಿ ಭಾರತೀಯರಿಗೆ ವೇದಿಕೆಯನ್ನು ಒದಗಿಸಲು ಉದ್ದೇಶಿಸಿದೆ:

 

  1. ಹೊರದೇಶಗಳಲ್ಲಿ ನೆಲೆಸಿರುವ ಕರ್ನಾಟಕದ ಜನರ ಹಿತಾಸಕ್ತಿಗಳಿಗೆ ಪೂರಕವಾದ ಎಲ್ಲಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು;
  2. ಹೊರದೇಶಗಳಲ್ಲಿನ ಕನ್ನಡಿಗರು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಬೆಳೆಸಿಕೊಂಡು ಅಭಿವೃದ್ಧಿಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಅವಕಾಶ ಕಲ್ಪಿಸಲು ಸಹಕರಿಸುವುದು;
  3. ಅನಿವಾಸಿ ಭಾರತೀಯರ ಸಹಕಾರದೊಂದಿಗೆ ರಾಜ್ಯದಲ್ಲಿನ ಐ.ಟಿ / ಬಿ.ಟಿ / ವಿಜ್ಞಾನ / ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧಿಸಲು ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸುವುದು ಮತ್ತು ಅನುಷ್ಠಾನಗೊಳಿಸುವುದು;
  4. ಅನಿವಾಸಿ ಭಾರತೀಯರನ್ನು ರಾಜ್ಯದಲ್ಲಿನ ಶೈಕ್ಷಣಿಕ ಹಾಗೂ ಇನ್ನಿತರ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವುದು;
  5. ಅನಿವಾಸಿ ಭಾರತೀಯರಿಂದ ರಾಜ್ಯದಲ್ಲಿನ ಕೈಗಾರಿಕೆಗಳಲ್ಲಿ ಮತ್ತು ಮೂಲಭೂತ ಸೌಕರ್ಯಗಳಲ್ಲಿ ಬಂಡವಾಳ ಹೂಡಿಕೆಯನ್ನು ಪ್ರೋತ್ಸಾಹಿಸುವುದು;
  6. ಅನಿವಾಸಿ ಭಾರತೀಯರನ್ನು ರಾಜ್ಯದ ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವುದು;
  7. ಅನಿವಾಸಿ ಭಾರತೀಯರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು.
×
ABOUT DULT ORGANISATIONAL STRUCTURE PROJECTS